ನೇಪಾಳದಲ್ಲಿದ್ದ ಕನ್ನಡಿಗರು ಸೇಫ್,ರಾಜ್ಯದ ಅಧಿಕಾರಿಗಳ ಸಂಪರ್ಕದಲ್ಲಿದ್ದಾರೆ; ಸಿಎಂ..!

ಬೆಂಗಳೂರು: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ರಾಜ್ಯ ಸರ್ಕಾರದ ಅಧಿಕಾರಿಗಳ ಸಂಪರ್ಕದಲ್ಲಿದ್ದು ಅವರನ್ನು ರಾಜ್ಯಕ್ಕೆ ಸುರಕ್ಷಿತರವಾಗಿ ಕರೆತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ,ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ.ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಈಗಾಗಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಹಾಗಾಗಿ ಯಾರೂ ಆತಂಕಪಡಬೇಡಿ ಎಂದಿದ್ದಾರೆ.

Related Articles

Comments (0)

Leave a Comment