ಕೆಎಸ್ಆರ್ಟಿಸಿ ನೇಮಕಾತಿ: ಜೂನ್ ಮೊದಲ ವಾರ 2 ಸಾವಿರ ಹೊಸ ನೌಕರರು ಕರ್ತವ್ಯಕ್ಕೆ ಹಾಜರು
- by Suddi Team
- May 28, 2025
- 7 Views

ಬೆಂಗಳೂರು: ಕೆಎಸ್‌ಆರ್‌ಟಿಸಿಯಲ್ಲಿ ಐದು ವರ್ಷಗಳಿಂದ ಬಾಕಿ ಉಳಿದಿದ್ದ ಚಾಲಕ ಕಂ ನಿರ್ವಾಹಕರ ನೇಮಕಾತಿ ಅಂತಿಮ ಹಂತಕ್ಕೆ ಬಂದಿದ್ದು, ಜೂನ್ ಮೊದಲ ವಾರದಲ್ಲಿ 2,000 ಹೊಸ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
‘ಚಾಲನಾ ಪರೀಕ್ಷೆಗೆ ಸಂಬಂಧಿಸಿದಂತೆ ಆಕ್ಷೇಪ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪರೀಕ್ಷೆ ಕಠಿಣವಾಗಿತ್ತು ಎಂದು ಕೆಲವರು ಆಕ್ಷೇಪ ಸಲ್ಲಿಸಿದ್ದರು. ಚಾಲನಾ ವೃತ್ತಿ ಆಗಿರುವುದರಿಂದ ಮುಂದೆ ಅವಘಡ ನಡೆಯದಂತೆ ನೋಡಿಕೊಳ್ಳುವುದು ಅಗತ್ಯ. ಅದಕ್ಕಾಗಿ ಪರೀಕ್ಷೆಯಲ್ಲಿ ಚಾಲನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗುತ್ತದೆ. ಆದರೂ ದೊಡ್ಡ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ’ ಮೊದಲ ವಾರದಲ್ಲಿ 2,000 ಹೊಸ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ.
Related Articles
Thank you for your comment. It is awaiting moderation.
Comments (0)