ಮಹದಾಯಿ ಯೋಜನೆ, ಗೋವಾ ಸಿಎಂಗೆ ಕೋರ್ಟ್‌ಗೆ ಹೋಗುವ ಹಕ್ಕಿಲ್ಲ; ಸಿದ್ದರಾಮಯ್ಯ

ನವದೆಹಲಿ: ಮಹದಾಯಿ ಯೋಜನೆ ವಿಚಾರ ಸಂಬಂಧ ಗೋವಾ ಮುಖ್ಯಮಂತ್ರಿಗಳಿಗೆ ನ್ಯಾಯಾಲಯದ ಮೊರೆ ಹೋಗಲು ಯಾವ ಹಕ್ಕೂ ಇಲ್ಲ (ಲೋಕಸ್ ಸ್ಟ್ಯಾಂಡಿ) ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಮ್ಮ ರಾಜ್ಯದ ಬಹು ನಿರೀಕ್ಷಿತ ಮಹದಾಯಿ ಯೋಜನೆ ವಿಚಾರ ನ್ಯಾಯಮಂಡಳಿಯಲ್ಲಿ ಈಗಾಗಲೇ ಇತ್ಯರ್ಥವಾಗಿದೆ. ಮಹದಾಯಿ ಯೋಜನೆಗೆ ಪರಿಸರ ಒಪ್ಪಿಗೆ ಸಿಗಬೇಕಾಗಿದೆಯೇ ಹೊರತು, ಉಚ್ಛ ನ್ಯಾಯಾಲಯದಲ್ಲಿಯೂ ಈ ವಿಚಾರ ಇತ್ಯರ್ಥವಾಗಿದೆ. ಆದ್ದರಿಂದ, ಗೋವಾ ಸಿಎಂ ಹೇಳಿಕೆ ಸರಿಯಾದುದಲ್ಲ ಎಂದರು.

ಗೋವಾ ಸಿಎಂಗೆ ನ್ಯಾಯಾಲಯದ ಮೊರೆ ಹೋಗಲು ಲೋಕಸ್ ಸ್ಟ್ಯಾಂಡಿ ಇಲ್ಲ. ಅವರು ನ್ಯಾಯಾಲಯದ ಮೊರೆ ಹೋಗಲು ನಮ್ಮ ಅಭ್ಯಂತರವಿಲ್ಲ. ನ್ಯಾಯಮಂಡಳಿ ಈಗಾಗಲೇ ನಿರ್ಧಾರ ಮಾಡಿದೆ. ಸುಪ್ರೀಂ ಕೋರ್ಟ್ ಸಹ ಎಲ್ಲ ವಿವಾದಗಳನ್ನೂ ಬಗೆಹರಿಸಿದೆ. ಅರಣ್ಯ ಹಾಗೂ ಪರಿಸರ ಇಲಾಖೆಯು ಕೇಂದ್ರ ಸರ್ಕಾರದಡಿಯಲ್ಲಿದ್ದು, ಕೇಂದ್ರ ಸರ್ಕಾರವು ಈ ಬಗ್ಗೆ ತೀರುವಳಿ ನೀಡಬೇಕಿದೆ ಅಷ್ಟೇ ಎಂದರು.

Related Articles

Comments (0)

Leave a Comment