ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್; ವರಿಷ್ಠರಿಗೆ ಕೃತಜ್ಞತೆ

ಬೆಂಗಳೂರು: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದಕ್ಕೆ ಪ್ರಮೋದ್ ಮಧ್ವರಾಜ್ ಸಂತಸ ವ್ಯಕ್ತಪಡಿಸಿದ್ದು, ಪಕ್ಷದ ರಾಷ್ಟ್ರೀಯ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್, ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಅಮರ್ ಪಾಲ್ ಮೌರ್ಯ ಹಾಗೂ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ತಮ್ಮ ಮೇಲಿಟ್ಟಿರುವ ವಿಶ್ವಾಸಕ್ಕಾಗಿ ಧನ್ಯವಾದ ತಿಳಿಸಿದ್ದಾರೆ.

ಕರ್ನಾಟಕದ ಜನತೆ, ಒಬಿಸಿ ಸಮುದಾಯಗಳು, ಮೀನುಗಾರ ಸಮುದಾಯ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನೀಡುತ್ತಿರುವ ಬೆಂಬಲ ಹಾಗೂ ಪ್ರೀತಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

ಸಂಘಟನೆಯನ್ನು ಬಲಪಡಿಸುವುದರ ಜೊತೆಗೆ ದೇಶಾದ್ಯಂತ ಒಬಿಸಿ ಸಮುದಾಯಗಳ ಪ್ರಾತಿನಿಧ್ಯ, ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸುವುದಾಗಿ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

Related Articles

Comments (0)