ಬೆಂಗಳೂರಿನ ಅಭಿವೃದ್ಧಿ ನಮ್ಮ ಸರ್ಕಾರದ ಕರ್ತವ್ಯ: ಸಿಎಂ
- by Suddi Team
- June 27, 2025
- 50 Views

ಬೆಂಗಳೂರು:ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕರಾಗಿದ್ದು ಅವರ ಕಟ್ಟಿದ ಬೆಂಗಳೂರಿನ ಅಭಿವೃದ್ಧಿ ನಮ್ಮ ಸರ್ಕಾರದ ಕರ್ತವ್ಯ ಮತ್ತು ಜವಾಬ್ದಾರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಬೆಂಗಳೂರನ್ನು ಇನ್ನಷ್ಟು ಅಭಿವೃದ್ಧಿ ಮಾಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಅದನ್ನು ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.
ಬೆಂಗಳೂರು ನಗರ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯಲು ಕೆಂಪೇಗೌಡರೇ ಮೂಲ ಕಾರಣ.ವಿಶ್ವಮಟ್ಟದಲ್ಲಿ ಬೆಂಗಳೂರು ಅತಿವೇಗದಲ್ಲಿ ಬೆಳೆಯುತ್ತಿರುವ ನಗರ. ಎಲ್ಲ ಜನರನ್ನೊಳಗೊಂಡ ಅಭಿವೃದ್ಧಿಗೊಳಿಸುವ, ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಅವರು ಕೈಗೊಂಡಿದ್ದರು. ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣವೇ ನಮ್ಮ ಸಂವಿಧಾನದ ಆಶಯ. 500 ವರ್ಷಗಳ ಹಿಂದೆಯೇ ನಾಡಪ್ರಭು ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಿಸುವ ದೂರದೃಷ್ಟಿಯನ್ನು ಹೊಂದಿದ್ದ ಮುತ್ಸದ್ದಿ ನಾಯಕರಾಗಿದ್ದರು. ವೃತ್ತಿಯಾಧಾರಿತ ಪೇಟೆಗಳನ್ನು ನಿರ್ಮಿಸಿ, ಬೆಂಗಳೂರನ್ನು ವಾಣಿಜ್ಯ ಕೇಂದ್ರವಾಗಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ ಎಂದರು.
ಕೆಂಪೇಗೌಡರ ಆಡಳಿತ ಜನಪರವಾಗಿದ್ದು, ಅವರನ್ನು ನೆನೆದು ಸ್ಪೂರ್ತಿಯನ್ನು ಪಡೆದುಕೊಳ್ಳಬೇಕಾಗುತ್ತದೆ. ಕೆಂಪೇಗೌಡರ ಬಗ್ಗೆ ಅಗಾಧ ಗೌರವವನ್ನು ಇಟ್ಟುಕೊಂಡಿದ್ದು, ಅವರ ಆಡಳಿತದ ವೈಖರಿ ನಮ್ಮೆಲ್ಲರಿಗೂ ಸ್ಪೂರ್ತಿ. ಎಲಾ ಜಾತಿಗಳಿಗೂ ಸಾಮಾಜಿಕ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದರು.
ಬೆಂಗಳೂರಿನ ಅಭಿವೃದ್ಧಿಗೆ ಕೆಂಪೇಗೌಡರು ಕಾರಣ:
ಹಂಪಿ ಬಹಳ ಪ್ರವರ್ಧಮಾನಕ್ಕೆ ಬಂದಿದ್ದ ಕಾಲದಲ್ಲಿ ಪ್ರೇರಣೆ ಪಡೆದು ಬೆಂಗಳೂರನ್ನು ಅಭಿವೃದ್ಧಿಪಡಿಸುವ ಉದ್ದೇಶ ಕೆಂಪೇಗೌಡರಿಗಿತ್ತು.ಹಾಗಾಗಿ ಬೆಂಗಳೂರು ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ, ಸ್ಟಾರ್ಟ್ ಅಪ್ ರಾಜಧಾನಿ , ಶೈಕ್ಷಣಿಕ ಹಾಗೂ ಆರೋಗ್ಯ ಕೇಂದ್ರವಾಗಿದ್ದರೆ ಅದಕ್ಕೆ ಈ ನಗರದ ಅಡಿಪಾಯ ಹಾಕಿದ ಕೆಂಪೇಗೌಡರು ಕಾರಣ ಎಂದರು.
Related Articles
Thank you for your comment. It is awaiting moderation.
Comments (0)