ಕಾಲ್ತುಳಿತ ಪ್ರಕರಣ, ನ್ಯಾ.ಕುನ್ಹಾ ವರದಿಯನುಸಾರ ಸರ್ಕಾರ ಶಿಸ್ತು ಕ್ರಮ ಜರುಗಿಸಿದೆ; ಸಿಎಂ

ನವದೆಹಲಿ: ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದ ಪ್ರಕರಣ ಸಂಬಂಧ ನ್ಯಾ. ಜಾನ್ ಮೈಕಲ್ ಕುನ್ಹಾ ಅವರ ವರದಿಯನ್ನು ಸಚಿವ ಸಂಪುಟ ಒಪ್ಪಿದ್ದು, ವರದಿಯ ಶಿಫಾರಸಿನ ಅನುಸಾರ ಸರ್ಕಾರವು ಶಿಸ್ತಿನ ಕ್ರಮವನ್ನು ಜರುಗಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಾಲ್ತುಳಿತ ಘಟನೆಯ ಸಂಬಂಧ ನ್ಯಾಯಮೂರ್ತಿ ಕುನ್ಹಾ ಅವರ ವಿಚಾರಣಾ ಆಯೋಗ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಿದೆ. ಕೆ‌ಎಸ್‌ಸಿಎ, ಡಿಎನ್ಎ ಎಂಟರ್ಟೇನ್ಮೆಂಟ್ ಹಾಗೂ ಆರ್‌ಸಿಬಿ ವಿರುದ್ಧ ಕಾನೂನಿನ ಕ್ರಮ ಜರುಗಿಸಲಾಗಿದೆ. ಪೊಲೀಸ್ ಆಯುಕ್ತರು, ಹೆಚ್ಚುವರಿ ಪೊಲೀಸ್ ಆಯುಕ್ತರು, ಎಸ್‌‌ಪಿ, ಎಸಿಪಿ ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್ ಸೇರಿ ಹಲವರನ್ನು ಅಮಾನತು ಮಾಡಲಾಗಿದೆ. ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ನ್ಯಾ. ಜಾನ್ ಮೈಕಲ್ ಕುನ್ಹಾ ಅವರ ವರದಿಯನುಸಾರ ಸರ್ಕಾರ ಶಿಸ್ತು ಕ್ರಮ ಜರುಗಿಸಿದೆ ಎಂದರು.

ಅಧಿಕಾರಿಗಳ ಜಟಾಪಟಿ ಕುರಿತು  ಪರಿಶೀಲನೆ:

ಕರ್ನಾಟಕ ಭವನದಲ್ಲಿ ಅಧಿಕಾರಿಗಳು ಜಟಾಪಟಿ ಮಾಡಿಕೊಂಡು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದರು.

Related Articles

Comments (0)

Leave a Comment