- ಮುಖ್ಯ ಮಾಹಿತಿ
- ರಾಜ್ಯ
- Like this post: 0
ಶತಾಯುಷಿ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
- by Suddi Team
- November 14, 2025
- 9 Views
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಶತಾಯುಷಿ,ವೃಕ್ಷಮಾತೆ ಸಾಲುಮರದ ತಿಮ್ಮಕ್ಕ(114) ನಿಧನರಾಗಿದ್ದಾರೆ.ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯ ಸಂಸ್ಕಾರಕ್ಕೆ ಸರ್ಕಾರ ಸುತ್ತೋಲೆ ಹೊರಡಿಸಿ ತಿಮ್ಮಕ್ಕರ ಕೊಡುಗೆಗೆ ಸರ್ಕಾರ ಗೌರವ ನೀಡುತ್ತಿದೆ.
ಕಳೆದ ಮೂರ್ನಾಲ್ಕು ದಿನದಿಂದ ತೀವ್ರ ಅನಾರೋಗ್ಯಕ್ಕೊಳಗಾದ ಸಾಲುಮರದ ತಿಮ್ಮಕ್ಕ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಅವರ ಕೊನೆಯುಸಿರೆಳೆದರು.
ಸಮಾಜಕ್ಕೆ ತಿಮ್ಮಕ್ಕ ಅವರು ನೀಡಿರುವ ಕೊಡುಗೆ ಮತ್ತು ಮರಗಳನ್ನು ಬೆಳೆಸಲು ಮಾದರಿಯಾಗಿ ನಿಂತಿದ್ದನ್ನು ಪರಿಗಣಿಸಿ ಸರ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ತಿಮ್ಮಕ್ಕ ಅವರ ಅಂತ್ಯ ಸಂಸ್ಕಾರ ಮಾಡುವ ನಿರ್ಧಾರ ಪ್ರಕಟಿಸಿದೆ.
ತಿಮ್ಮಕ್ಕ ಸಾಧನೆ:
ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವಿನ 4.5-ಕಿಲೋಮೀಟರ್ (2.8 ಮೈಲಿ) ಹೆದ್ದಾರಿಯ ಉದ್ದಕ್ಕೂ 385 ಆಲದ ಮರಗಳನ್ನು ನೆಡುವ ಮತ್ತು ಅವುಗಳನ್ನು ಪೋಷಿಸುವ ಕಾರ್ಯಕ್ಕೆ ಅವರು ಹೆಸರುವಾಸಿಯಾಗಿದ್ದರು.
ಅವರು ಯಾವುದೇ ಔಪಚಾರಿಕ ಶಿಕ್ಷಣವನ್ನು ಪಡೆಯಲಿಲ್ಲ ಅವರ ಕೆಲಸವನ್ನು ಭಾರತದ ರಾಷ್ಟ್ರೀಯ ನಾಗರಿಕ ಪ್ರಶಸ್ತಿಯಿಂದ ಗೌರವಿಸಲಾಗಿದೆ. ಅವರ ಕೆಲಸವನ್ನು ಭಾರತ ಸರ್ಕಾರ ಗುರುತಿಸಿತು ಮತ್ತು ಅವರಿಗೆ 2019 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಯಿತು.
ಪ್ರಶಸ್ತಿಗಳು:
ರಾಷ್ಟ್ರೀಯ ಪೌರ ಪ್ರಶಸ್ತಿ – 1995
ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ – 1997
ವೀರಚಕ್ರ ಪ್ರಶಸ್ತಿ – 1997
ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ – ಇವರಿಂದ ಮಾನ್ಯತೆಯ ಪ್ರಮಾಣ ಪತ್ರ
ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು – ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ.
ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ – 2000
ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ – 2006
ಪಂಪಾಪತಿ ಪರಿಸರ ಪ್ರಶಸ್ತಿ
ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ
ವನಮಾತೆ ಪ್ರಶಸ್ತಿ
ಮಾಗಡಿ ವ್ಯಕ್ತಿ ಪ್ರಶಸ್ತಿ
ಶ್ರೀಮಾತಾ ಪ್ರಶಸ್ತಿ
ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ
ಕರ್ನಾಟಕ ಪರಿಸರ ಪ್ರಶಸ್ತಿ
ಮಹಿಳಾರತ್ನ ಪ್ರಶಸ್ತಿ
ನ್ಯಾಷನಲ್ ಸಿಟಿಜನ್ ಪ್ರಶಸ್ತಿ
ರಾಜ್ಯೋತ್ಸವ ಪ್ರಶಸ್ತಿ
ಹೂವಿನಹೊಳೆ ಪ್ರತಿಷ್ಠಾನ Archived 2021-05-18 ವೇಬ್ಯಾಕ್ ಮೆಷಿನ್ ನಲ್ಲಿ.ದ ವಿಶ್ವಾತ್ಮ ಪುರಸ್ಕಾರ 2015
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ.
2010ರ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಲಭಿಸಿದೆ.
2019 ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
Related Articles
Thank you for your comment. It is awaiting moderation.


Comments (0)