ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ..!
- by Suddi Team
- June 24, 2025
- 101 Views

ಹುಬ್ಬಳ್ಳಿ: ಲೂಪ್ ಲೈನ್ ಮೇಲ್ದರ್ಜೆಗೇರಿಸುವ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದಾಗಿ ರಾಜ್ಯದ ಮೂರು ಒಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳ ಮಾರ್ಗವನ್ನು ಬದಲಾಯಿಸುವುದಾಗಿ ನೈಋತ್ಯ ರೈಲ್ವೆ ತಿಳಿಸಿದೆ.
ನಾಗಸಮುದ್ರಂ ರೈಲ್ವೆ ನಿಲ್ದಾಣದಲ್ಲಿ ಹಾಲಿ ಇರುವ ಲೂಪ್ ಲೈನ್ (ರೋಡ್-3) ಅನ್ನು ಮುಖ್ಯ ಲೈನ್ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸುವ ಮತ್ತು ಓವರ್‌ಹೆಡ್ ಎಕ್ವಿಪ್ಮೆಂಟ್ಸ್ (OHE) ಪೋರ್ಟಲ್‌ಗಳನ್ನು ಸ್ಥಳಾಂತರಿಸುವ ಕಾಮಗಾರಿಯಿಂದಾಗಿ, ಜುಲೈ 2ರಿಂದ ಜುಲೈ 28 ರವರೆಗೆ 27 ದಿನಗಳ ಕಾಲ ಲೂಪ್ ಲೈನ್ ಅನ್ನು ಸ್ಥಗಿತಗೊಳಿಸಲಾಗುತ್ತದೆ. ಈ ಕಾಮಗಾರಿಯ ಹಿನ್ನೆಲೆಯಲ್ಲಿ, ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ಪ್ರಕಟಣೆ ಮೂಲಕ ನೈಋತ್ಯ ರೈಲ್ವೆ ತಿಳಿಸಿದೆ.
ಮಾರ್ಗ ಬದಲಾವಣೆ ವಿವರ:
1. ರೈಲು ಸಂಖ್ಯೆ 22231 ಕಲಬುರಗಿ – ಎಸ್‌ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (ಶುಕ್ರವಾರ ಹೊರತುಪಡಿಸಿ) ಅನಂತಪುರ, ಧರ್ಮಾವರಂ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಲಹಂಕ ಮಾರ್ಗವಾಗಿ ಸಂಚರಿಸಲಿದೆ.
2. ರೈಲು ಸಂಖ್ಯೆ 20703 ಕಾಚೇಗುಡ – ಯಶವಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್ (ಬುಧವಾರ ಹೊರತುಪಡಿಸಿ) ಧರ್ಮಾವರಂ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ.
3. ರೈಲು ಸಂಖ್ಯೆ 22232 ಎಸ್‌ಎಂವಿಟಿ ಬೆಂಗಳೂರು – ಕಲಬುರಗಿ ವಂದೇ ಭಾರತ್ ಎಕ್ಸ್‌ಪ್ರೆಸ್ (ಗುರುವಾರ ಹೊರತುಪಡಿಸಿ) ಯಲಹಂಕ, ಪೆನುಕೊಂಡ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಧರ್ಮಾವರಂ ಮತ್ತು ಅನಂತಪುರ ಮಾರ್ಗವಾಗಿ ಸಂಚರಿಸಲಿದೆ.
ಮಾರ್ಗ ಬದಲಾವಣೆಯ ಅವಧಿಯಲ್ಲಿ ಮೇಲೆ ತಿಳಿಸಿದ ಯಾವುದೇ ರೈಲುಗಳ ನಿಲುಗಡೆಗಳನ್ನು ಬಿಟ್ಟುಬಿಡುವುದಿಲ್ಲ. ಎಲ್ಲ ನಿಗದಿತ ನಿಲುಗಡೆಗಳನ್ನು ನಿರ್ವಹಿಸಲಾಗುತ್ತದೆ ಎಂದು ತಿಳಿಸಿದೆ.
Related Articles
Thank you for your comment. It is awaiting moderation.
Comments (0)