ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಉಚಿತ ಚಾಲನಾ ತರಬೇತಿ: ಕೆಎಸ್‌ಆರ್‌ಟಿಸಿಯಿಂದ ಅರ್ಜಿ ಆಹ್ವಾನ
- by Suddi Team
- February 25, 2026
- 15 Views
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಅಲ್ಪಸಂಖ್ಯಾತ ನಿರ್ದೇಶನಾಲಯದ ಸಹಯೋಗದೊಂದಿಗೆ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರೀ ವಾಹನ ಚಾಲನಾ ತರಬೇತಿ ಹಾಗೂ ಪರವಾನಗಿ (License) ನೀಡುವ ಯೋಜನೆಯನ್ನು ಹಮ್ಮಿಕೊಂಡಿದೆ.
ಈ ಯೋಜನೆಯಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕಾಲ ಉಚಿತ ತರಬೇತಿಯನ್ನು ನೀಡಲಾಗುವುದು. ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಕೂಡ ಒದಗಿಸಲಾಗುವುದು ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.
ಅರ್ಹತೆಗಳು:
ಸಮುದಾಯ: ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯದವರಿಗೆ ಮಾತ್ರ ಅವಕಾಶ.
ವಯೋಮಿತಿ: 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿರಬೇಕು.
ವಿದ್ಯಾಭರ್ಹತೆ: ಕನಿಷ್ಠ ಎಸ್‌ಎಸ್‌ಎಲ್‌ಸಿ (SSLC) ಉತ್ತೀರ್ಣರಾಗಿರಬೇಕು.
ತರಬೇತಿ ಕೇಂದ್ರಗಳು:
ಆಸಕ್ತ ಅಭ್ಯರ್ಥಿಗಳು ನೇರವಾಗಿ ತಮ್ಮ ಹತ್ತಿರದ ನಿಗಮದ ತರಬೇತಿ ಕೇಂದ್ರಗಳಿಗೆ (ಮಳವಳ್ಳಿ, ಮಾಲೂರು, ಹಾಸನ, ಚಿಕ್ಕಮಗಳೂರು ಮತ್ತು ಹೊಳಲ್ಕೆರೆ) ಭೇಟಿ ನೀಡಿ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.
ದಿನಾಂಕ:
ತರಬೇತಿಯು 23-03-2026 ರಿಂದ ಪ್ರಾರಂಭವಾಗಲಿದ್ದು, ಆಸಕ್ತರು ಅದಕ್ಕೂ ಮೊದಲು ಅಧಿಕೃತ ವೆಬ್‌ಸೈಟ್ ksrtcjobs.karnataka.gov.in ಮೂಲಕ ಅಥವಾ ನೇರವಾಗಿ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಪ್ರಕಟಣೆಯಲ್ಲಿ ನೀಡಿರುವ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ.

Related Articles
Thank you for your comment. It is awaiting moderation.


Comments (0)