ಬಿಟಿಎಂ ಲೇಔಟ್ ಮೆಟ್ರೋ ನಿಲ್ದಾಣಗಳ ಮರುನಾಮಕರಣ ಮಾಡಿ:ಬಿಎಂಆರ್ಸಿಎಲ್ ಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ

ಬೆಂಗಳೂರು: ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನಮ್ಮ ಮೆಟ್ರೋ ನಿಲ್ದಾಣಗಳಿಗೆ ಸ್ಥಳೀಯ ಪ್ರದೇಶದ ಹೆಸರು, ಇತಿಹಾಸ ಹಾಗೂ ಭೌಗೋಳಿಕ ಮಹತ್ವವನ್ನು ಪರಿಗಣಿಸಿ ಸೂಕ್ತ ಮರುನಾಮಕರಣ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಪ್ರಸ್ತುತ ಕೆಲವು ಮೆಟ್ರೋ ನಿಲ್ದಾಣಗಳ ಹೆಸರುಗಳು ನಿಲ್ದಾಣವಿರುವ ನಿಖರ ಸ್ಥಳ ಅಥವಾ ಆ ಪ್ರದೇಶದ ಜನರಿಗೆ ಹೆಚ್ಚು ಪರಿಚಿತವಾಗಿರುವ ಹೆಸರನ್ನು ಬಿಂಬಿಸುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ನಿಲ್ದಾಣಗಳ ಸ್ಥಳವನ್ನು ಗುರುತಿಸುವಲ್ಲಿ ಗೊಂದಲ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಹೆಸರುಗಳನ್ನು ಬದಲಾಯಿಸುವುದು ಅಗತ್ಯವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹೆಸರು ಬದಲಾವಣೆಗೆ ಪ್ರಸ್ತಾಪಿಸಲಾದ ನಿಲ್ದಾಣಗಳು:

ಜೆ ಪಿ ನಗರ 4ನೇ ಹಂತ ಮೆಟ್ರೋ ನಿಲ್ದಾಣ -> ಎನ್ ಎಸ್ ಪಾಳ್ಯ ಮೆಟ್ರೋ ನಿಲ್ದಾಣ

ತಾವರೆಕೆರೆ ಮೆಟ್ರೋ ನಿಲ್ದಾಣ -> ಎನ್ ಎಸ್ ಪಾಳ್ಯ ಮೆಟ್ರೋ ನಿಲ್ದಾಣ

ಡೈರಿ ವೃತ್ತ ಮೆಟ್ರೋ ನಿಲ್ದಾಣ -> ಲಕ್ಷ್ಮಿಸಂದ್ರ ಮೆಟ್ರೋ ನಿಲ್ದಾಣ

ಮರುನಾಮಕರಣಕ್ಕೆ ಪರಿಗಣಿಸಬೇಕಾದ ಪ್ರಮುಖ ಅಂಶಗಳು:

ನಿಲ್ದಾಣವಿರುವ ಸ್ಥಳೀಯ ಪ್ರದೇಶದ ಪ್ರಚಲಿತ ಹೆಸರು.

ಸ್ಥಳೀಯವಾಗಿ ಸಾರ್ವಜನಿಕರಿಗೆ ಹೆಚ್ಚು ಪರಿಚಿತವಾಗಿರುವ ಹೆಸರು.

ಪ್ರದೇಶದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವ.

ಪ್ರಯಾಣಿಕರಿಗೆ ನಿಲ್ದಾಣವನ್ನು ಸುಲಭವಾಗಿ ಗುರುತಿಸಲು ಅನುಕೂಲವಾಗುವ ಹೆಸರು.

ಆದ್ದರಿಂದ, ಬಿಟಿಎಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸಂಬಂಧಪಟ್ಟ ಮೆಟ್ರೋ ನಿಲ್ದಾಣಗಳ ಹೆಸರುಗಳನ್ನು ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಾಗೂ ಸ್ಥಳೀಯ ಮುಖಂಡರ ಅಭಿಪ್ರಾಯಗಳನ್ನು ಪಡೆದು, ಸಾರ್ವಜನಿಕ ಹಿತಾಸಕ್ತಿಗೆ ಅನುಗುಣವಾಗಿ ಮರುನಾಮಕರಣ ಮಾಡಲು ಮುಂದಿನ ಅಗತ್ಯ ಕ್ರಮಕೈಗೊಳ್ಳುವಂತೆ ಸಚಿವರು ಬಿಎಂಆರ್‌ಸಿಎಲ್‌ಗೆ ಸೂಚಿಸಿದ್ದಾರೆ.

 

Related Articles

Comments (0)

Leave a Comment