ಕಂಡಕ್ಟರ್ ಆದ ಸಿದ್ದರಾಮಯ್ಯ; ಉಚಿತ ಪ್ರಯಾಣದ 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ
- by Suddi Team
- July 15, 2025
- 500 Views

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು.
ಅಧಿಕೃತ ನಿವಾಸ ಕಾವೇರಿ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಬಸ್ ಹತ್ತಿ ಇಟಿಎಂ ಯಂತ್ರ ಕೈಯಲ್ಲಿ ಹಿಡಿದು ಕೆಲಕಾಲ ಕಂಡಕ್ಟರ್ ಆದರು. ಶಕ್ತಿ ಯೋಜನೆಯಡಿ 500ನೇ ಕೋಟಿ ಉಚಿತ ಟಿಕೆಟ್ ವಿತರಣೆ ಮಾಡಿದರು, ಬಸ್ಸಿನಲ್ಲಿದ್ದ ಮಹಿಳೆಯರು, ವಿದ್ಯಾರ್ಥಿನಿಯರು, ಹಿರಿಯ ನಾಗರಿಕರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು 30 ಮಹಿಳಾ ಪ್ರಯಾಣಿಕರಿಗೆ ಇಳಕಲ್ ಸೀರೆ ನೀಡಿ ಗೌರವಿಸಿದರು. 500ನೇ ಕೋಟಿ ಶಕ್ತಿ ಟಿಕೆಟ್ ಪಡೆದ ಮಹಿಳೆಗೆ ಶಾಲು ಹೊದಿಸಿ, ಹಾರ ಹಾಕಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.
ನಂತರ ಮಾತನಾಡಿದ ಸಿಎಂ, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ವಿವರಿಸಿದರು.
ಶಕ್ತಿ ಯೋಜನೆ; 500 ಕೋಟಿ ದಾಟಿದ ಉಚಿತ ಟಿಕೆಟ್:
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಇಂದಿಗೆ 500 ಕೋಟಿ ಮಹಿಳಾ ಪ್ರಯಾಣಿಕರ ಟ್ರಿಪ್ ಅನ್ನು ತಲುಪುವ ಮುಖಾಂತರ ದೇಶದಲ್ಲೇ ಹೊಸ ಮೈಲಿಗಲ್ಲನ್ನು ತಲುಪಿದೆ. ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಲಾಗುತ್ತಿರುವುದಿಂದ ಮಹಿಳೆಯರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ, ಆರೋಗ್ಯ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ. ಶಕ್ತಿ ಯೋಜನೆಯು ಅಭೂತಪೂರ್ವ ಯಶಸ್ಸನ್ನು ಕಂಡು ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಯೋಜನೆಯಾಗಿ ಮುಂದುವರೆಯುತ್ತಿರುವುದಕ್ಕೆ ಸಾಕ್ಷಿಯಾಗಿದೆ.
ಬಸ್ಸಿನಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ 500ನೇ ಕೋಟಿ ಟಿಕೆಟ್ ಅನ್ನು ಸಾಂಕೇತಿಕವಾಗಿ ಇಂದು ವಿತರಿಸಿದ್ದು, ಶಕ್ತಿ ಯೋಜನೆಯಲ್ಲಿ ಇಲ್ಲಿಯವರೆಗೂ 12,669 ಕೋಟಿ ರೂ. ಮಹಿಳಾ ಟಿಕೆಟ್ ಮೌಲ್ಯ. ನಗರ, ಸಾಮಾನ್ಯ, ವೇಗದೂತ ಬಸ್ಸುಗಳಲ್ಲಿ ರಾಜ್ಯದ್ಯಾಂತ ರಾಜ್ಯದ ನಿವಾಸಿಗಳಾದ ಎಲ್ಲ ಮಹಿಳೆಯರು, ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಶಕ್ತಿ ಯೋಜನೆಗೆ ಮುನ್ನ ಸಾರಿಗೆ ಬಸ್ಸುಗಳಲ್ಲಿ ಪ್ರತಿ ದಿನ 85.84 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈಗ 1.17 ಕೋಟಿ ಜನರು ಪ್ರತಿ ದಿನ ಪ್ರಯಾಣಿಸುತ್ತಿದ್ದಾರೆ. ಸಾರಿಗೆ ನಿಗಮಗಳನ್ನು ಸದೃಡಗೊಳಿಸಲು, ಹೊಸ ಬಸ್ಸುಗಳ ಸೇರ್ಪಡೆ ಮತ್ತು ನೇಮಕಾತಿಗೆ ಚಾಲನೆ ನೀಡಲಾಗಿದೆ.
ಹೊಸ ಬಸ್ಸುಗಳ ಸೇರ್ಪಡೆ ಮತ್ತು ನೇಮಕಾತಿಯು ಸಂಪೂರ್ಣ ಸ್ಥಗಿತಗೊಂಡಿತ್ತು. ಕಳೆದ ಎರಡು ವರ್ಷದಲ್ಲಿ 5,800 ಹೊಸ ಬಸ್ಸುಗಳ ಸೇರ್ಪಡೆಗೆ ಅನುಮೋದನೆ ನೀಡಿತು. ಈಗಾಗಲೇ ನಾಲ್ಕು ನಿಗಮಗಳಲ್ಲಿ 5,049 ಹೊಸ ಬಸ್ಸುಗಳ ಸೇರ್ಪಡೆಯಾಗಿದೆ. ಅದೇ ರೀತಿ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಲಾಗಿದೆ. ಈಗಾಗಲೇ 6,700 ಹೊಸ ನೇಮಕಾತಿ ಮತ್ತು 1,000 ಅನುಕಂಪದ ನೇಮಕಾತಿ ಪೂರ್ಣಗೊಳಿಸಲಾಗಿದೆ. ಒಟ್ಟು 10,000 ನೇಮಕಾತಿ ಸಾರಿಗೆ ನಿಗಮದಲ್ಲಿ ಕಳೆದ ಎರಡು ವರ್ಷದ ಅವಧಿಯಲ್ಲಿ ಚಾಲನೆ ದೊರಕಿದೆ.
ಶಕ್ತಿ ಫೂರ್ವ 21,164 ಅನುಸೂಚಿಗಳಿದ್ದು, ಶಕ್ತಿ ನಂತರ 23,635ಕ್ಕೆ ಹೆಚ್ಚಳವಾಗಿದೆ. ಅದೇ ರೀತಿ ಶಕ್ತಿ ಪೂರ್ವ ಒಟ್ಟು ಬಸ್ಸುಗಳು 23,948 ಇದ್ದದ್ದು ನಂತರ 26,130ಕ್ಕೆ ಏರಿಕೆಯಾಗಿದೆ. ಹಳೆಯ 2,828 ವಾಹನಗಳನ್ನು ಬದಲಿಸಲಾಗಿದೆ. ಕಳೆದ ಎರಡು ವರ್ಷದಲ್ಲಿ ನಾಲ್ಕೂ ಸಾರಿಗೆ ನಿಗಮಗಳಿಗೆ 185 ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿಗಳು ಸಾರಿಗೆ ನಿಗಮಗಳಿಗೆ ಲಭಿಸಿರುತ್ತದೆ.
Related Articles
Thank you for your comment. It is awaiting moderation.
Comments (0)