Video-ಕಂಠೀರವ ಕ್ರೀಡಾಂಗಣದಲ್ಲಿ ಪುನೀತ್ ಪಾರ್ಥಿವ ಶರೀರ ಸಾರ್ವಜನಿಕ ದರ್ಶನಕ್ಕೆ ಅವಕಾಶ..
- by Suddi Team
- October 29, 2021
- 58 Views

ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿ ನಟ ಪುನೀತ್ ರಾಜ್‍ಕುಮಾರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ರಾತ್ರಿಯಿಡೀ ಅಭಿಮಾನಿಗಳಿಗೆ ಅವಕಾಶ ನೀಡಲಾಗಿದೆ.ಭಾನುವಾರ ಬೆಳಗ್ಗೆ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ.
ಸದಾಶಿವನಗರದ ಪುನೀತ್ ನಿವಾಸದಿಂದ ಪಾರ್ಥಿವ ಶರೀರವನ್ನು ಕಂಠೀರವ ಕ್ರೀಡಾಂಗಣಕ್ಕೆ ತರಲಾಗಿದ್ದು, ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರು, ಚಿತ್ರರಂಗದ ಗಣ್ಯರು ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ನಮನ ಸಲ್ಲಿಸಿದರು.
ರಾಜ್ಯದ ಮೂಲೆ ಮೂಲೆಯಿಂದ ಪುನೀತ್ ಅಭಿಮಾನಿಗಳು ಕಂಠೀರವ ಕ್ರೀಡಾಂಗಣದತ್ತ ಆಗಮಿಸುತ್ತಿದ್ದಾರೆ. ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ ನೂಕುನುಗ್ಗಲಾಗುತ್ತಿದ್ದು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಣ ಮಾಡುತ್ತಿದ್ದಾರೆ.
ಇಂದು ರಾತ್ರಿ, ನಾಳೆ ಇಡೀ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ವಿದೇಶದಲ್ಲಿರುವ ಪುತ್ರ ದೃತಿ ನಾಳೆ ಸಂಜೆ ಆಗಮಿಸಲಿದ್ದು, ನಂತರ ಕಂಠೀರವ ಸ್ಟುಡಿಯೋದಲ್ಲಿ ರಾಜ್ ದಂಪತಿ ಸಮಾಧಿ ಪಕ್ಕದಲ್ಲೇ ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ.
Related Articles
Thank you for your comment. It is awaiting moderation.
Comments (0)